Home » Uncategorized » ಅಂತರಾಷ್ರ‍್ಟೀಯ ಮಹಿಳಾ ದಿನಾಚರಣೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಅಂತರಾಷ್ರ‍್ಟೀಯ ಮಹಿಳಾ ದಿನಾಚರಣೆ ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ

ಬೀದರ, ಮಾರ್ಚ.18 (ಕರ್ನಾಟಕ ವಾರ್ತೆ):- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆ ಬೀದರ ಸಂಯುಕ್ತಾಶ್ರಯದಲ್ಲಿAದು ಅಂತರಾಷ್ರ‍್ಟೀಯ ಮಹಿಳಾ ದಿನಾಚರಣೆ ಅಂಗವಾಗಿ ಜನವಾಡ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೋಡೆ ಅವರು ಸಸಿಗೆ ನೀರರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ, ವರದಕ್ಷಿಣೆ ಕಾಯ್ದೆ ಕುರಿತು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯ ಉಪ ನಿರ್ದೆಶಕ ಶ್ರೀಧರ ಎಮ್.ಎಸ್ ಅಧ್ಯಕ್ಷಿಯ ಭಾಷಣ ಮಾಡಿದರು. ಬೀದರ ವಕೀಲ ಮಂಗಲಾ ಹಿರೇಗೌಡ ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸವಲತ್ತುಗಳ ಕುರಿತು ಉಪನ್ಯಾಸ ನೀಡಿದರು. ಜಯಶ್ರೀ ಪಾಟೀಲ್ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ನಿರುಪಣಾ ಅಧಿಕಾರಿ ಶ್ರೀಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆಯ ಶಿಶು ಅಭಿವೃಧಿ ಯೋಜನಾಧಿಕಾರಿ ರೂಪಾ, ಎಸ್ ಕೋಟೆಗೌಡರ, ವಕೀಲ ಸಂಜಿವಕುಮಾರ, ಆಕಾಶ, ಗೌರಿ ಶಂಕರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧಿ ಇಲಾಖೆ ಸಿಬ್ಬಂಧಿ ವರ್ಗದವರು ಸೇರಿದಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಾಹಾಯಕಿಯರು ಉಪಸ್ಥಿತರಿದ್ದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This