ಬೀದರ, ಮಾರ್ಚ.25 (ಕರ್ನಾಟಕ ವಾರ್ತೆ):- ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ಪರೀಕ್ಷೆ ಮಾರ್ಚ್.25 ರಂದು ಯಶಸ್ವಿಯಾಗಿ ಜರುಗಿದ್ದು, ಜಿಲ್ಲೆಯಲ್ಲಿ ಇಂದು ನಡೆದ ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ಪರೀಕ್ಷೆಗೆ 25818 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 996 ವಿದ್ಯಾರ್ಥಿಗಳು ಗೈರಾಗಿದ್ದಾರೆಂದು ಬೀದರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







