Home » ಬೀದರ » ಪೊಲೀಸ್ ಇಲಾಖೆಯಲ್ಲಿ 5764 ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಪೊಲೀಸ್ ಇಲಾಖೆಯಲ್ಲಿ 5764 ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ನೇಮಕಾತಿ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರ ಕಚೇರಿ ಸೂಚನೆ ನೀಡಿದೆ.
ಒಟ್ಟು 5764 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದರಲ್ಲಿ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ 4114 ಹುದ್ದೆಗಳು ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 1650 ಹುದ್ದೆಗಳು ಸೇರಿವೆ.
ಆಡಳಿತಾತ್ಮಕ ಕಾರಣಗಳಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ಕೆಲವು ಹುದ್ದೆಗಳನ್ನು ವಿವಿಧ ಘಟಕಗಳಿಗೆ ಮರು ಹಂಚಿಕೆ ಮತ್ತು ಪರಿಷ್ಕರಣೆ ಮಾಡಲಾಗಿದೆ. ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರಗಳನ್ನು ಅನುಬಂಧದಲ್ಲಿ ನೀಡಲಾಗಿದ್ದು, ಸಂಬಂಧಪಟ್ಟ ಘಟಕಗಳಿಂದ ಪರಿಷ್ಕೃತ ವರ್ಗೀಕರಣವನ್ನು ಪಡೆದು ಶೀಘ್ರವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವಂತೆ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಅವರು ಆದೇಶಿಸಿದ್ದಾರೆ.
ಈ ಕುರಿತು ಪೊಲೀಸ್ ಮಹಾನಿರ್ದೇಶಕರು (ನೇಮಕಾತಿ) ಅವರಿಗೆ ಪತ್ರ ಬರೆಯಲಾಗಿದ್ದು, ಡಿಜಿ ಮತ್ತು ಐಜಿಪಿ ಅವರಿಂದಲೂ ಅನುಮೋದನೆ ದೊರೆತಿದೆ. ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಕೆಎಸ್‌ಆರ್‌ಪಿ ಕಮಾಂಡೆಂಟ್‌ಗಳಿಗೆ ರವಾನಿಸಲಾಗಿದೆ.
ತಮ್ಮ ಘಟಕಗಳಿಗೆ ಮರು ಹಂಚಿಕೆಯಾಗಿರುವ ಹುದ್ದೆಗಳ ವರ್ಗೀಕರಣವನ್ನು ನೇಮಕಾತಿ ವಿಭಾಗಕ್ಕೆ ಶೀಘ್ರ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರಿಂದ ಪೊಲೀಸ್ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿದೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This