ಬೀದರ, ಫೆಬ್ರವರಿ 25 (ಕರ್ನಾಟಕ ವಾರ್ತೆ): ಭಾರತ ಜನಗಣತಿ 2027ರ ಕಾರ್ಯನಿರ್ವಹಣೆಗೆ ಸಂಬಂಧಿಸಿ ಬೀದರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ವಿವಿಧ ಜನಗಣತಿ ಚಾರ್ಜ್ಗಳಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ (21) ಮತ್ತು ಎಂಟಿಎಸ್ – ಮಲ್ಟಿ ಟಾಸ್ಕಿಂಗ್ ಸ್ಟಾಫ್ (02) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳು 18 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ ಎಂದು ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ) ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಕನಿಷ್ಠ 60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು. 60% ಕ್ಕಿಂತ ಕಡಿಮೆ ಅಂಕ ಪಡೆದವರ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಹಾಗೂ ಅಂತಹ ಅರ್ಜಿಗಳು ತಿರಸ್ಕರಿಸಲಾಗುತ್ತದೆ.
ವಯೋಮಿತಿ:
ಜನರಲ್ ವರ್ಗ – 35 ವರ್ಷ
ಓಬಿಸಿ – 38 ವರ್ಷ
ಎಸ್ಸಿ/ಎಸ್ಟಿ – 40 ವರ್ಷ
ಅಭ್ಯರ್ಥಿಗಳು ಕಡ್ಡಾಯವಾಗಿ ಬೀದರ ಜಿಲ್ಲೆಯಲ್ಲಿಯೇ ವಾಸಿಸುತ್ತಿರಬೇಕು. ಆಯ್ಕೆ ಪ್ರಕ್ರಿಯೆ ಸರ್ಕಾರದ ನಿಯಮಾವಳಿಗಳ ಪ್ರಕಾರ ರೊಸ್ಟರ್ ಪದ್ಧತಿ ಅನುಸರಿಸಿ ನಡೆಯಲಿದೆ.
ಇಚ್ಛೆಯುಳ್ಳ ಹಾಗೂ ಅರ್ಹ ಅಭ್ಯರ್ಥಿಗಳು ರೂ.50 ಶುಲ್ಕ ಪಾವತಿಸಿ, ಖುದ್ದಾಗಿ ಅರ್ಜಿ ಪಡೆದು, ಅಗತ್ಯ ದಾಖಲೆಗಳ ಸ್ವಯಂ ದೃಢೀಕರಣದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಫೆಬ್ರವರಿ 26ರೊಳಗಾಗಿ ಬೀದರ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿದ್ಧೋದ್ಧೇಶ ಸಹಕಾರ ಸಂಘ (ನಿ), ಜಿಲ್ಲಾಧಿಕಾರಿಗಳ ಕಚೇರಿ, ಬೀದರದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಚೇರಿ, ಬೀದರ ಅಥವಾ www.bidar.nic.in� ವೆಬ್ಸೈಟ್ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.







