ಬೀದರ, ಮಾರ್ಚ.20 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್.23 ರಂದು ಮಧ್ಯಾಹ್ನ 12.30 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತ್ಯುತ್ಸವ ಕಾರ್ಯಕ್ರಮ ಜರುಗಲಿದೆ.
ಉದ್ಘಾಟನೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾಡಲಿದ್ದಾರೆ.
ಅಧ್ಯಕ್ಷತೆ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ನಾರಾಯಣರಾವ್, ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ, ಹುಮನಾಬಾದ ಶಾಸಕ ಡಾ.ಸಿದ್ದು ಪಾಟೀಲ, ವಿಧಾನ ಪರಿಷತ್ ಶಾಸಕರುಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ ಜಿ.ನಮೋಶಿ, ಭೀಮರಾವ ಬಿ.ಪಾಟೀಲ, ಡಾ.ಎಂ.ಜಿ.ಮೂಳೆ ಹಾಗೂ ಅಧ್ಯಕ್ಷರು, ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ, ಕಲಬುರಗಿಯ ಬಾಬು ಹೊನ್ನನಾಯ್ಕ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ, ಬೀದರ ನಗರಾಭಿವರದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಅತಿಥಿ ಉಪನ್ಯಾಸವನ್ನು ಬೀದರ ಬಸವ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೂಜ್ಯ ಶ್ರೀ ಡಾ.ಗಂಗಾಂಬಿಕಾ ಅಕ್ಕ ನೀಡಲಿದ್ದಾರೆ.







