Home » ರಾಜ್ಯ » ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

ಚಿಕ್ಕಮಗಳೂರು , ಮೇ 26: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಯಜಮಾನಿಯರು ಅಂತ ಹೆಸರಿಟ್ಟರು. ಈಗಾಗಲೇ 19 ತಿಂಗಳ ಹಣ ಫಲಾನುಭವಿಗಳಿಗೆ ತಲುಪಿದೆ. ಆದಷ್ಟು ಶೀಘ್ರದಲ್ಲಿ ಎಲ್ಲಾ ಮಹಿಳೆಯವರಿಗೆ ಗೃಹ ಲಕ್ಷ್ಮಿ ಹಣ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜನರಿಗೆ ಆಶ್ರಯ‌ ನೀಡಿದ್ದು, ಆಸ್ಪತ್ರೆ, ಸ್ಕೂಲ್‌, ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರಗಳು. ಬಡವರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದೇ ಕಾಂಗ್ರೆಸ್ ಎಂದು ಹೇಳಿದರು. ರಾಜಕೀಯವಾಗಿ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು ಜಿಲ್ಲೆ, ಐವತ್ತು ವರ್ಷಗಳ ಹಿಂದೆ ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಮಾಡಲಾಗುವುದು ಎಂದರು.

ಜನರ ಅಭಿವೃದ್ಧಿಗಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಹಾಕಲಾಗುತ್ತಿದೆ. ನೇರವಾಗಿ ಎರಡು ಸಾವಿರ ರೂ ಜನರಿಗೆ ತಲುಪುತ್ತಿದೆ, ಗ್ಯಾರಂಟಿ ಹೆಸರನ್ನು ಕೆಡಿಸಲು ವಿರೋಧ ಪಕ್ಷಗಳಿಂದ ಅಪಪ್ರಚಾರ ನಡೆಯಿತು. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡುವ ಧೈರ್ಯ ಬಿಜೆಪಿಯವರಿಗಿಲ್ಲ, ಇದೇ ಬಿಜೆಪಿಯವರು ಮಹಾರಾಷ್ಟ್ರ, ದೆಹಲಿ,‌ ಯುಪಿಯಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಹೇಳಿದರು.

Jaishankar Pakistanaಕ್ಕೆ ವಾರ್ನಿಂಗ್! ಮತ್ತೆ ಬಂತು ಕೊರೋನಾ ಗುಮ್ಮ!!
ಮಹಾರಾಷ್ಟ್ರದಲ್ಲಿ ಇದುವರೆಗೂ ಒಂದು ಕಂತಿನ‌ ಲಾಡ್ಲಿ ಬೆಹನ್ ಯೋಜನೆಯ ಹಣ ಕೊಟ್ಟಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ 160 ಅಂಗನವಾಡಿ ಶಿಕ್ಷಕಿಯರ ನೇಮಕ ಮಾಡಲಾಗಿದ್ದು, ಸಂಪೂರ್ಣ ಅಧಿಕಾರಿಗಳಿಂದ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲೇ 130 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲಾಗುವುದು. ಊಟದ ಜೊತೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂದರು.

ಈ ವೇಳೆ ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಎಚ್.ಡಿ.ತಮ್ಮಯ್ಯ, ರಾಜೇಗೌಡ, ನಯನಾ ಮೋಟಮ್ಮ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಎಚ್.ಹರೀಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನಾ, ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This