Home » ಉದ್ಯೋಗ » ಬಳ್ಳಾರಿಯಲ್ಲಿ ಜಿಲ್ಲಾ ಉದ್ಯೋಗ ಮೇಳ – ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!

ಬಳ್ಳಾರಿಯಲ್ಲಿ ಜಿಲ್ಲಾ ಉದ್ಯೋಗ ಮೇಳ – ನಿರುದ್ಯೋಗಿ ಯುವಕರಿಗೆ ಸುವರ್ಣಾವಕಾಶ!

ಬಳ್ಳಾರಿ: ಸಂಜೀವಿನಿ–ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ವಿಜಯನಗರ ಕಾಲೇಜು ಹಾಗೂ ರೈಟ್‌ವೇ ಸೊಲ್ಯೂಷನ್ (ಹೊಸಪೇಟೆ) ಇವರ ಸಂಯುಕ್ತಾಶ್ರಯದಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಫೆಬ್ರವರಿ 21 ರಂದು ಜಿಲ್ಲಾ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳವು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ನಡೆಯಲಿದೆ.
ಈ ಮೇಳದಲ್ಲಿ 50 ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು,
ಸುಮಾರು 2000 ಕ್ಕೂ ಹೆಚ್ಚು ವಿವಿಧ ಹುದ್ದೆಗಳ ಉದ್ಯೋಗಾವಕಾಶಗಳು ಲಭ್ಯವಿರುತ್ತವೆ.
ಅರ್ಹತೆ:
ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್ ಸೇರಿದಂತೆ ಯಾವುದೇ ಪದವಿ ಅಥವಾ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ನೋಂದಣಿ ಮಾಡಲು:
https://forms.gle/xffk84NMQZEomds86 ಲಿಂಕ್‌ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು.
ಬಳ್ಳಾರಿ ಜಿಲ್ಲೆಯ ಎಲ್ಲಾ ನಿರುದ್ಯೋಗಿ ಯುವಕರು ಹಾಗೂ ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಟ್ಟಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This