ಬೀದರ, ಫೆ.25 (ಕರ್ನಾಟಕ ವಾರ್ತೆ): ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಬೀದರ ವತಿಯಿಂದ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ (SCP) ಮತ್ತು ಗಿರಿಜನ ಉಪಯೋಜನೆ (TSP) (10+1) ಕುರಿ/ಮೇಕೆ ಘಟಕ ಸ್ಥಾಪನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಗೆ ಒಟ್ಟು 24 ಪರಿಶಿಷ್ಟ ಜಾತಿ (ಎಸ್ಸಿ) ಮತ್ತು 14 ಪರಿಶಿಷ್ಟ ಪಂಗಡ (ಎಸ್ಟಿ) ಗುರಿಯನ್ನು ನಿಗದಿಪಡಿಸಲಾಗಿದೆ. ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಹಾಗೂ ಪಶುಸಂಗೋಪನೆಯಲ್ಲಿ ತೊಡಗಿರುವ ಆಸಕ್ತರನ್ನು ಆಯ್ಕೆ ಮಾಡಲಾಗುತ್ತದೆ.
➤ ಅರ್ಹತಾ ಮಾನದಂಡ:
• ವಯಸ್ಸು 18 ರಿಂದ 60 ವರ್ಷ ಒಳಗೆ ಇರಬೇಕು
• RD ನಂಬರಿರುವ ಜಾತಿ ಪ್ರಮಾಣ ಪತ್ರ ಕಡ್ಡಾಯ
• FRUITS ತಂತ್ರಾಂಶದಲ್ಲಿ ನೋಂದಣಿ ಮಾಡಿರಬೇಕು
ಅರ್ಜಿಗಳನ್ನು ತಮ್ಮ ತಮ್ಮ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಕಚೇರಿಯಿಂದ ಪಡೆದು, ಮಾರ್ಚ್ 12, 2026 ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.
ಬೀದರ ತಾಲ್ಲೂಕಿನವರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಬೀದರ ಕಚೇರಿಯಿಂದ ಅರ್ಜಿ ಪಡೆದು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲ್ಲೂಕಿನ ಪಶುವೈದ್ಯಾಧಿಕಾರಿಗಳ ಕಚೇರಿ ಅಥವಾ ನಿಗಮದ ಬೀದರ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.







