ಬೀದರ, ಫೆಬ್ರವರಿ 27 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 1 ರಂದು ಮಧ್ಯಾಹ್ನ 12 ಗಂಟೆಗೆ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರ, ಬೀದರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಉದ್ಘಾಟಿಸಲಿದ್ದಾರೆ. ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಬೀದರ ಲೋಕಸಭಾ ಸದಸ್ಯರಾದ ಸಾಗರ ಈಶ್ವರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಲಾ ನಾರಾಯಣರಾವ್, ಔರಾದ್ (ಬಿ) ಶಾಸಕ ಪ್ರಭು ಬಿ. ಚವ್ಹಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ, ಬೀದರ ದಕ್ಷಿಣ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಹುಮನಾಬಾದ ಶಾಸಕ ಡಾ. ಸಿದ್ದು ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶೀಲ ಜಿ. ನಮೋಶಿ, ಭೀಮರಾವ ಬಿ. ಪಾಟೀಲ, ಡಾ. ಎಂ.ಜಿ. ಮೂಳೆ ಅವರು ಭಾಗವಹಿಸಲಿದ್ದಾರೆ.
ಅದರೊಂದಿಗೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಕೃಷ್ಣಾ ಮೇಲ್ದಂಡೆ ಯೋಜನೆ (ಕಾಡಾ) ಭೀಮರಾಯನಗುಡಿ, ಕಲಬುರಗಿಯ ಅಧ್ಯಕ್ಷರಾದ ಬಾಬು ಹೊನ್ನನಾಯ್ಕ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ ಗೌಸ ಹಾಗೂ ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ತಡೋಳಾದ ಕಟ್ಟಿಮನಿ ಹಿರೇಂಠ ಸಂಸ್ಥಾನದ ಪೂಜ್ಯ ಶ್ರೀ ಬ್ರಹ್ಮ ಡಾ. ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ಅತಿಥಿ ಉಪನ್ಯಾಸವನ್ನು ನೀಡಲಿದ್ದಾರೆ ಎಂದು ಪ್ರಕಟಣೆ ತದೆ.







