Home » ಬೀದರ್ » ಮಾರ್ಚ್ 24–26 ರಂದು “Nature’s Pharmacy” ವಿಷಯದ ರಾಷ್ಟ್ರೀಯ ಸಮ್ಮೇಳನ

ಮಾರ್ಚ್ 24–26 ರಂದು “Nature’s Pharmacy” ವಿಷಯದ ರಾಷ್ಟ್ರೀಯ ಸಮ್ಮೇಳನ

ಬೀದರ, ಮಾರ್ಚ.9 (ಕರ್ನಾಟಕ ವಾರ್ತೆ):- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “Exploring Nature’s Pharmacy: Potentials of Medicinal and Aromatic Plants for Health, Livelihoods, Bio-economy and Conservation” ವಿಷಯ ಮೇಲೆ 2026ನೇ ಮಾರ್ಚ.24 ರಿಂದ 26 ರವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಯುವ ಉದ್ಯಮಿದಾರರು ಭಾಗವಹಿಸಬಹುದಾಗಿದೆ. ಅಲ್ಲದೇ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧವನ್ನು ಸಹ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಸಂಶೋಧನಾ ಪ್ರಬಂಧಕ್ಕೆ ನಗದು ಬಹುಮಾನವನ್ನು ನೀಡಲಾಗುತ್ತದೆ.
ಆಸಕ್ತರು 2026ನೇ ಮಾರ್ಚ.20 ರೊಳಗಾಗಿ ರಜಿಸ್ಟ್ರೇಷನ್ ಲಿಂಕ್ https://forms.gle/xnlek2pwuBTXmNyz7   ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಗಳ ಮೊಬೈಲ್ ಸಂಖ್ಯೆ: 9620767819 ಮತ್ತು 9743084194 ಗೆ ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in  ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This