ಬೀದರ, ಮಾರ್ಚ.13 (ಕರ್ನಾಟಕ ವಾರ್ತೆ):- 2026-27ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿಯ ದಾಖಲಾತಿಗಾಗಿ 2026ನೇ ಮಾರ್ಚ್.22 ರಂದು ಬೆಳಿಗ್ಗೆ 10:30 ರಿಂದ 1:00 ಗಂಟೆಯವರೆಗೆ ಔರಾದ (4), ಬಸವಕಲ್ಯಾಣ (4), ಬೀದರ್ (3) ಹಾಗೂ ಹುಮನಾಬಾದ (2) ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತಿದ್ದು, ಸದರಿ ಪ್ರವೇಶ ಪರೀಕ್ಷೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ=2023ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸದರಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಝಿರಾಕ್ಸ್, ಕಂಪ್ಯೂಟರ್ ಅಂಗಡಿಗಳು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಹೊಂದಿದ ವಿದ್ಯಾರ್ಥಿಗಳು, ನಿಯೋಜಿತ ಶಿಕ್ಷಕರು, ಜಾಗೃತ ದಳದವರನ್ನು ಹೊರುತಪಡಿಸಿ ಇನ್ನುಳಿದವರಿಗೆ ಅನುಮತಿ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದು, ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ನಕಲು ಬರೆದ ಚೀಟಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದು ನಿರ್ಬಂಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.









