Home » Uncategorized » ನಗರದ 10 ಹಾಸಿಗೆಗಳ ಆಸ್ಪತ್ರೆಗೆ ಸಿಇಓ ಡಾ.ಗಿರೀಶ ಬದೋಲೆ ಭೇಟಿ, ಪರಿಶೀಲನೆ

ನಗರದ 10 ಹಾಸಿಗೆಗಳ ಆಸ್ಪತ್ರೆಗೆ ಸಿಇಓ ಡಾ.ಗಿರೀಶ ಬದೋಲೆ ಭೇಟಿ, ಪರಿಶೀಲನೆ

ಬೀದರ, ಮಾರ್ಚ.17 (ಕರ್ನಾಟಕ ವಾರ್ತೆ):- ಬೀದರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರು ಸೋಮವಾರ ನಗರದ 10 ಹಾಸಿಗೆಗಳ ಆಸ್ಪತ್ರೆಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಲಭ್ಯವಿರುವ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಿದರು.
ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ರೋಗಿಗಳಿಗೆ ನೀಡಲಾಗುತ್ತಿರುವ ಚಿಕಿತ್ಸೆ, ಔಷಧಗಳ ಲಭ್ಯತೆ ಮತ್ತು ಆಸ್ಪತ್ರೆಯ ಸ್ವಚ್ಛತೆಯ ಬಗ್ಗೆ ಮಾಹಿತಿ ಪಡೆದರು. ಬಡ ಮತ್ತು ಸಾಮಾನ್ಯ ಜನರಿಗೆ ಸರ್ಕಾರದ ಆರೋಗ್ಯ ಸೌಲಭ್ಯಗಳು ಸಮರ್ಪಕವಾಗಿ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭಿಸಲಾದ ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸ್ಥಳೀಯ ರೋಗಿಗಳಿಗೆ, ಈ ಘಟಕವು ವರದಾನವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಘಟಕದಲ್ಲಿರುವ ಯಂತ್ರೋಪಕರಣಗಳ ಕಾರ್ಯನಿರ್ವಹಣೆ ಮತ್ತು ರೋಗಿಗಳಿಗೆ ಕಲ್ಪಿಸಲಾಗಿರುವ ಸೌಕರ್ಯಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಪಾತ್ರ ದೊಡ್ಡದು ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಉತ್ತಮ ಸೇವೆ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ, ಜಿಲ್ಲಾ ಅಸಾಂಕ್ರಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಕಿರಣ್ ಪಾಟೀಲ್, ಪ್ರಭಾರಿ ಬೀದರ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಶಾಂತಲಿAಗ್ ಮಠಪತಿ, ಪ್ರಭಾರಿ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ವರ್ಷಾ, ಹಿರಿಯ ವೈದ್ಯರು ಸೇರಿದಂತೆ ಆಸ್ಪತ್ರೆಯ ನರ್ಸಿಂಗ್ ಮತ್ತು ಆಡಳಿತ ಸಿಬ್ಬಂದಿಗಳು ಉಪಸ್ಥಿತರಿದ್ದರು

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This