ಬೀದರ, ಮಾರ್ಚ.17 (ಕರ್ನಾಟಕ ವಾರ್ತೆ):-2025-26ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ವತಿಯಿಂದ ನೋಂದಾಯಿತ ಯುವಕ/ಯುವತಿ ಸಂಘಗಳಿಗೆ ಕ್ರೀಡಾ/ಸಂಗೀತ ಸಾಮಗ್ರಿಗಳನ್ನು ವಿತರಿಸಲು ಅರ್ಜಿ ಸಲ್ಲಿಸುವ ಅವಧಿಯನ್ನು 2026ನೇ ಮಾರ್ಚ್.26 ರವರೆಗೆ ವಿಸ್ತರಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಾಯಿತ ಆಸಕ್ತ ಯುವಕ/ಯುವತಿ ಸಂಘಗಳು ಅರ್ಜಿಗಳನ್ನು ಸಹಾಯಕ ನಿರ್ದೇಶಕರವರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಬೀದರ ಕಛೇರಿಯಿಂದ ಪಡೆದು ಸಂಪೂರ್ಣ ವಿವರದೊಂದಿಗೆ 2026ನೇ ಮಾರ್ಚ್.26 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾಗಿದ್ದಲ್ಲಿ, ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಲಾಟರಿ ಮುಖಾಂತರ ಅರ್ಜಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 9591609691ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







