Home » Uncategorized » ನಾಳೆ ಉದ್ಯೋಗ ಮೇಳ: ಹೆಸರು ನೋಂದಣಿಗೆ ಸೂಚನೆ

ನಾಳೆ ಉದ್ಯೋಗ ಮೇಳ: ಹೆಸರು ನೋಂದಣಿಗೆ ಸೂಚನೆ

ಬೀದರ, ಮಾರ್ಚ.23 (ಕರ್ನಾಟಕ ವಾರ್ತೆ):- ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಬೀದರ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ, ಬೀದರನಲ್ಲಿ 2026ನೇ ಮಾರ್ಚ್.25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿವೆ. ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 7892620675/9886367517/ 9901563260/ 9164741989/ 9591114834 ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ. ಈ ಭಾಗದ ಅಭ್ಯರ್ಥಿಗಳಿಗಾಗಿ ಗಮನಕ್ಕೆ ಬರುವಂತಾಗಲೂ ಕ್ರಮ ಕೈಗೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This