Home » Uncategorized » ಏಪ್ರಿಲ್.12ರಂದು 6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪರೀಕ್ಷೆ

ಏಪ್ರಿಲ್.12ರಂದು 6ನೇ ತರಗತಿ ಪ್ರವೇಶಾತಿಗಾಗಿ ಸಾಮಾನ್ಯ ಪರೀಕ್ಷೆ

ಬೀದರ, ಮಾರ್ಚ.31 (ಕರ್ನಾಟಕ ವಾರ್ತೆ):- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ದಿ:12-04-2026 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಜ್ಞಾನ ಸುಧಾ ವಿದ್ಯಾಲಯ ಮಾಮನಕೇರಿ ಬೀದರ, ಹಾಗೂ ಅಕ್ಕಾಮಹಾದೇವಿ ಮಹಿಳಾ ಪದವಿ ಪೂರ್ವ ಕಾಲೇಜು ಕೇಂದ್ರ ಬಸ್ ನಿಲ್ದಾಣ ಹತ್ತಿರ ಬೀದರ ಸದರಿ ಶಾಲೆ/ಕಾಲೇಜುಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಏಪ್ರಿಲ್ ಮೊದಲನೆ ವಾರದಲ್ಲಿ ಪ್ರವೇಶಾತಿ ಪತ್ರ (ಹಾಲ್‍ಟಿಕೆಟ್) ಗಳನ್ನು https://dom.karnataka.gov.in  ಆನ್‍ಲೈನ್ ಮುಖಾಂತರ ಪಡೆಯಬಹುದು ಅಥವಾ  ಅಲ್ಪಸಂಖ್ಯಾತರ ಜಿಲ್ಲಾ ಕಛೇರಿ ಮತ್ತು ತಾಲ್ಲೂಕ ಕಛೇರಿಗಳು ಹಾಗೂ ಸಂಬಂಧಪಟ್ಟ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಪಡೆಯಬಹುದಾಗಿರುತ್ತದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This