Home » Uncategorized » 5-17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಉಚಿತವಾಗಿ ಅಪ್ಡೇಟ್ ಮಾಡಲು ಅವಕಾಶ

5-17 ವರ್ಷದ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ಉಚಿತವಾಗಿ ಅಪ್ಡೇಟ್ ಮಾಡಲು ಅವಕಾಶ

ಬೀದರ, ಮೇ.04 (ಕರ್ನಾಟಕ ವಾರ್ತೆ):- ಜಿಲ್ಲೆಯಾದ್ಯಂತ 5 ರಿಂದ 7 ಹಾಗೂ 15 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬೈಯೋಮೆಟ್ರಿಕ್ ಅಪೆÇ್ಲೀಡಗಾಗಿ (Mandatory Biometric Update)   ಜಿಲ್ಲೆಯ ಎಲ್ಲಾ ಆಧಾರ ಕೇಂದ್ರಗಳಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ.  ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 2026ನೇ ಸೆಪ್ಟೆಂಬರ್.30 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪೆÇೀಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ ಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ.
ಪ್ರಯುಕ್ತ ಜಿಲ್ಲೆಯ ಎಲ್ಲಾ ಪೆÇೀಷಕರು ಈ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕು. ಆಧಾರನಲ್ಲಿ ಜನನ ದಿನಾಂಕವನ್ನು ಒಂದು ಬಾರಿ ಮಾತ್ರ ತಿನ್ನುಪಡಿಗೆ ಹಾಗೂ ಹೆಸರು ತಿದ್ದುಪಡಿ ಕೂಡಾ ಒಂದು ಬಾರಿ ಮಾತ್ರ ತಿದ್ದುಪಡಿಗೆ ಅವಕಾಶ ಇರುವುದರಿಂದ ಪೂಷಕರು ಸದರಿ ತಿದ್ದುಪಡಿಗಳನ್ನು ಗಮನದಲ್ಲಿ ಇಟ್ಟಿಕೊಂಡು ತಿದ್ದುಪಡಿ ಮಾಡಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಈ ಸುದ್ದಿಗೆ ನಿಮ್ಮ ಪ್ರತಿಕ್ರಿಯೆಯನ್ನು ವಿಶ್ರಾಂತಿ ಮಾಡಿ

Leave a Comment

Share This